Thursday, July 7, 2022

Latest Posts

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ

ಹೊಸದಿಗಂತ ವರದಿ,ಮಂಗಳೂರು:

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ ಉಡುಪಿ ಜಲೆಯಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ.
ಭಾನುವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ರಾತ್ರಿ 8 ಗಂಟೆಯ ಬಳಿಕ ಭಾರೀ ಗಾಳಿ ಸಹಿತ ಮಳೆಯ ಆಗಮನವಾಗಿತ್ತು.
ಇದುವರೆಗೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದರೂ ಮಂಗಳೂರು ನಗರಕ್ಕೆ ಮಾತ್ರ ಮಳೆರಾಯನ ಎಂಟ್ರಿಯಾಗಿರಲಿಲ್ಲ. ಆದರೆ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ.


ಗುಡುಗು ಸಿಡಿಲಿನಿಂದ ಕೂಡಿದ ಉತ್ತಮ ಮಳೆ ಸುರಿದುದರಿಂದ ಕಾದ ಇಳೆ ತಂಪಾದಂತಾಗಿದೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಸುರಿದಿದೆ. ಉಉಡುಪಿ ಜಿಲ್ಲೆ ವಿವಿದೆಡೆ ರಸ್ತೆ, ಮನೆ ಮೇಲೆ ಮರ ಊರು;ಇಬಿಡಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.


ಭಾರಿ ಮಳೆಯ ಕಾರಣದಿಂದ ಮಂಗಳೂರು ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಅರ್ಧ ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಕೈಕೊಟ್ಟಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss