ಹೊಸದಿಗಂತ ಹಾಸನ:
ಹಾಸನ ಜಿಲ್ಲೆಯ ಮುಂದುವರಿದ ವರುಣನ ಅಬ್ಬರ ಮುಂದುವರೆದಿದ್ದು ಮಲೆನಾಡು ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ರಾಟೆ ಮನೆ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-4796 ನಂಬರ್‌ನ ಲಾರಿ ಬಾರಿ ಮಳೆ ಹಿನ್ನಲೆಯಲ್ಲಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವೀಕೆಂಡ್ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಓಡಾಡುತ್ತಿದ್ದರು ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಬಾರಿ ಅನಾಹುತ ತಪ್ಪಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.