August 27, 2026
Thursday, August 27, 2026
spot_img

ಮುಂದುವರಿದ ಪುಷ್ಯ ಮಳೆಯಬ್ಬರ: ಆ.4ರಂದು ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆ.4ರಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.

ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್‌ಇ, ಸಿಬಿಎಸ್‌ಇ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಾಗಳು ಸಹಿತ ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗುತ್ತದೆ. ಪೂರ್ವ ನಿಗದಿಯಾಗಿದ್ದ ವಿಶ್ವವಿದ್ಯಾಲಯ, ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ನೆರೆ, ಪ್ರವಾಹ ಭೀತಿ ಎದುರಾಗಿದೆ. ಎಲ್ಲೆಡೆ ಜಿಲ್ಲಾಡಳಿತ ತೀವ್ರ ನಿಗಾ ಇರಿಸಿದ್ದು, ಯಾವುದೇ ಪ್ರಾಕೃತಿಕ ವಿಕೋಪ ತಲೆದೋರಿದಲ್ಲಿ ಅವುಗಳನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !