ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.
ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.
ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಕುಡಿದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

