ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗಾ, ಯಾದಗಿರಿ ಜಿಲ್ಲೆಗಳಿಗೆ ಭಾರೀ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಇಂದು ಸಂಜೆಯ ನಂತರ ಕರಾವಳಿ ಕರ್ನಾಟಕ, ಮಲೆನಾಡು ಸೇರಿದಂತೆ ಬೆಂಗಳೂರಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ಮಧ್ಯಪ್ರದೇಶ, ಛತ್ತೀಸ್‌ಗಢ, ಕರ್ನಾಟಕ ಮತ್ತು ಮಹಾರಾಷ್ಟ್ರದ ಹೆಚ್ಚಿನ ಪ್ರದೇಶಗಳಲ್ಲಿ ಇಂದಿನಿಂದ ಮೇ 16, 2025 ರವರೆಗೆ ಮಳೆ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಸಿಕ್ಕಿಂ, ಮಿಜೋರಾಂ ಮತ್ತು ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇವುಗಳಲ್ಲದೆ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ತ್ರಿಪುರ ಮತ್ತು ಮಣಿಪುರದ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮೋಡ ಕವಿದ ವಾತಾವರಣವಿರಬಹುದು ಎಂದು ಐಎಂಡಿ ವರದಿ ಮಾಡಿದೆ.