ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ರಾಜ್ಯ ಬಿಜೆಪಿಯು 6 ತಂಡಗಳನ್ನು ರಚನೆ ಮಾಡಿದ್ದು, ಜುಲೈ 30 ಮತ್ತು 31ರಂದು ಈ ತಂಡಗಳು ಪ್ರವಾಹ ಪೀಡಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.
ಆರ್. ಅಶೋಕ್ ಅವರ ತಂಡವು ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ, ಆರಗ ಜ್ಞಾನೇಂದ್ರ ಅವರ ತಂಡವು ಶಿವಮೊಗ್ಗ ಜಿಲ್ಲೆಯಲ್ಲಿ, ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರ ತಂಡವು ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ, ಛಲವಾದಿ ನಾರಾಯಣಸ್ವಾಮಿ ತಂಡವು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ, ಅರವಿಂದ ಬೆಲ್ಲದ್ ಅವರ ತಂಡವು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ, ಬಿ. ಶ್ರೀರಾಮುಲು ಅವರ ತಂಡವು ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.