WEATHER | ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ.

ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!