ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗಲಿದೆ. 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಹಾಸನ, ಕಲಬುರ್ಗಿ, ಬೀದರ್, ಬೆಳಗಾವಿ, ರಾಯಚೂರು, ಯಾದಗಿರಿ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.