Monday, October 13, 2025

ಕರ್ನಾಟಕದ ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಲವೆಡೆ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ ಇದ್ದು, ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ .

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಧಾರವಾಡ, ಹುಬ್ಬಳ್ಳಿ, ಧಾರವಾಡ, ಕುಂದಗೋಳ, ವೈಎನ್ ಹೊಸಕೋಟೆ, ತಾಳಿಕೋಟೆ, ಸೈದಾಪುರ, ಹಿಡಕಲ್, ಗಂಗಾಪುರ, ಭಾಲ್ಕಿ, ಜೇವರ್ಗಿ, ಗೌರಿಬಿದನೂರು, ಗಬ್ಬೂರು, ಯಡ್ರಾಮಿ, ಶಿರಹಟ್ಟಿ, ಶಾಹಪುರ, ರಾಯಚೂರು, ನಿಪ್ಪಾಣಿ, ನಲ್ವತವಾಡ, ಮುನಿರಾಬಾದ್, ಮುದ್ದೇಬಿಹಾಳ, ಮಂಠಾಳ, ಕುರ್ಡಿ, ಕಲಘಟಗಿ, ಕಕ್ಕೇರಿ, ಹುಮ್ನಾಬಾದ್​ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

error: Content is protected !!