ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಬೀಸಿದ್ದು , ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆ ಭಾರತ ಹವಾಮಾನ ಇಲಾಖೆ (ಐಎಂಡಿ) ರಾತ್ರಿ 9 ಗಂಟೆಯವರೆಗೆ ರೆಡ್ ಅಲರ್ಟ್ ಜಾರಿ ಮಾಡಿದ್ದು,ಎಚ್ಚರಿಕೆಯಿಂದ ಇರಲು ಸೂಚಿಸಿದೆ.
ಇತ್ತ ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದ ಕೆಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಹೀಗಾಗಿ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಬಿರುಗಾಳಿಗೆ ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಮರಗಳ ಕೊಂಬೆಗಳು ಉರುಳಿಬಿದ್ದಿವೆ. ಸಂಚಾರ ಅಸ್ತವ್ಯಸ್ತವಾಗಿದೆ.
ಮುಂದಿನ ಮೂರು ಗಂಟೆಗಳ ಕಾಲ ದೆಹಲಿ, ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್), ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಧ್ಯಮದಿಂದ ತೀವ್ರವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.