ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಕಾಲೇಜು ಮುಖ್ಯಸ್ತರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು ಎಂದು ಜಿಲ್ಲಾಡಳಿತ ಹೇಳಿದೆ.