ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ಮೂರು ಗಂಟೆಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಮತ್ತು ಮಿಂಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಂಭವವಿದೆ.
ಹವಾಮಾನ ಇಲಾಖೆಯು ಜನರಿಗೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ್ದು, ಮನೆಯ ಬಾಗಿಲುಗಳನ್ನು ಮುಚ್ಚಿ, ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ, ಸುರಕ್ಷಿತ ಆಶ್ರಯ ತಾಣವನ್ನು ಆರಿಸಿಕೊಳ್ಳಿ, ಮರಗಳ ಕೆಳಗೆ ಆಶ್ರಯ ಪಡೆಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಲಾಗಿದೆ.
ಪ್ರಯಾಣದಲ್ಲಿರುವವರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು ಮತ್ತು ರಸ್ತೆಯಲ್ಲಿ ನೀರು ನಿಂತಿದ್ದರೆ ಅಪಾಯಕಾರಿ ಪ್ರದೇಶಗಳನ್ನು ದಾಟದಂತೆ ಎಚ್ಚರಿಕೆ ವಹಿಸಬೇಕು. ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರಿಂದ ಸಂಭಾವ್ಯ ಅಪಾಯಗಳನ್ನು ತಪ್ಪಿಸಬಹುದು ಎಂದು ತಿಳಿಸಿದೆ.