Wednesday, September 17, 2025

WEATHER |ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಹಾವೇರಿ,ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಕಕ್ಕೇರಿ, ಲಿಂಗಸುಗೂರು, ಇಳಕಲ್, ಹುಣಸಗಿಯಲ್ಲಿ ಭಾರಿ ಮಳೆಯಾಗಿದೆ. ಆಳಂದ, ಯಲಬುರ್ಗಾ, ಶೋರಾಪುರ, ಮಸ್ಕಿ, ಹುನಗುಂದ, ಗೌರಿಬಿದನೂರು, ತಾವರಗೇರಾ, ಶಿರಗುಪ್ಪ, ನಾರಾಯಣಪುರ, ಕೂಡಲಸಂಗಮ, ಕಾರವಾರ, ಶಾಹಪುರ, ನೆಲೋಗಿ, ನಲ್ವತವಾಡ, ಕುಷ್ಟಗಿಯಲ್ಲಿ ಮಳೆಯಾಗಿದೆ.

ಇದನ್ನೂ ಓದಿ