ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಗುವಾಹಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಲವು ಭಾಗಗಳು ಹಾನಿಗೊಳಗಾಗಿದೆ .
ಈ ಕುರಿತ ವಿಡಿಯೋವನ್ನು ವಿಮಾನ ನಿಲ್ದಾಣದ ಬಳಕೆದಾರರು ಹಂಚಿಕೊಂಡಿದ್ದು, ವಿಮಾನ ನಿಲ್ದಾಣದ ಛಾವಣಿಗೆ ಹಾನಿಯಾಗಿ ನೀರು ಸೋರುತ್ತಿರುವುದು ಸೇರಿ ಮಳೆಯಿಂದಾದ ಅನಾಹುತದ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ.
ಗುವಾಹಟಿಯಲ್ಲಿ ಭಾನುವಾರ ಸಂಜೆ ಭಾರಿ ಮಳೆಯಾಗಿದೆ. IMD ಪ್ರಕಾರ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಿಂಚು, ಗುಡುಗು ಬಿರುಗಾಳಿ ಸಹಿತ ಮಳೆಯಾಗಿದೆ. ಮನೆ, ಕಟ್ಟಡಗಳು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ತ್ರಿಪುರಾದಂತಹ ಇತರ ಈಶಾನ್ಯ ರಾಜ್ಯಗಳಲ್ಲೂ ಭಾರೀ ಮಳೆಯಾದ ವರದಿಯಾಗಿದೆ.