ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮಳೆ ಆರಂಭವಾಗಿದ್ದು, ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಮೇಲ್ಛಾವಣಿಯಿಂದ ನೀರು ಸೋರುತ್ತಿದೆ.
ಈ ಕುರಿತು ಮುಖ್ಯ ಅರ್ಚಕರಾದ ಸತ್ಯೇಂದ್ರ ದಾಸ್ ಮಾಹಿತಿ ನೀಡಿದ್ದು, ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಶನಿವಾರ ಮಧ್ಯರಾತ್ರಿ ತುಂತುರು ಮಳೆಯ ಬಳಿಕ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ, ಜೊತೆಗೆ ಗರ್ಭಗುಡಿಯ ಮೇಲ್ಛಾವಣಿಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದಿದ್ದಾರೆ.
ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರಿನ ಸೋರಿಕೆಯಾಗಿದೆ. ರಾಮ ಲಲ್ಲಾನ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕೆ ಜನರು ಬರುವ ಸ್ಥಳದ ಮೇಲಿನ ಛಾವಣಿಯಿಂದ ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.