ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ರಜೆ ಘೋಷಿಸಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಪಾಠ, ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು. ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಿ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕಾಗಿ ಸೂಚಿಸಲಾಗಿದೆ.