ಹೊಸ ದಿಗಂತ ವರದಿ, ಮಂಡ್ಯ :
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಲ್ಕೂ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದ್ದು, ಜಲಾಶಯಗಳ ಹೊರ ಹರಿವಿನ ಪ್ರಮಾಣವೂ ಅಧಿಕವಾಗಿರುವ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಕೆ.ಆರ್.ಎಸ್. ಮತ್ತು ಕಬಿನಿ ಜಲಾಶಯಗಳಿಂದ ಲಕ್ಷಾಂತರ ಕ್ಯೂಸೆಕ್ ನೀರನ್ನು ಹೊರಬಿಡುತ್ತಿರುವ ಕಾರಣ ಮುತ್ತತ್ತಿ ಪ್ರವಾಸಿ ತಾಣಕ್ಕೆ ಪ್ರವಾಸಿಗರು ಹೋಗದಂತೆ ನಿಷೇಧಿಸಿ ಮಳವಳ್ಳಿ ತಹಸೀಲ್ದಾರ್ ಲೋಕೇಶ್ ಅವರು ಆದೇಶ ಹೊರಡಿಸಿದ್ದಾರೆ.