ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ: ರೈತರಲ್ಲಿ ಸಂತಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಳೆಯ ಅಬ್ಬರ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಧಾರಾಕಾರ ಮಳೆ ಸುರಿದಿದೆ.

ಬೆಳಿಗ್ಗೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಬಿಟ್ಟು-ಬಿಟ್ಟು ಸುರಿಯುತ್ತಲೇ ಇತ್ತು. ಮಳೆ ಅಬ್ಬರಕ್ಕೆ ಕಾಫಿ ತೋಟದಲ್ಲಿ ನೀರು ನಿಲ್ಲುವಂತಾಗಿದೆ. ಬೆಳಗಿನ ಜಾವವೇ ಆರಂಭವಾದ ಮಳೆಯಿಂದ ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಮೂಡಿಗೆರೆ ತಾಲೂಕಿನ ಹುದುಸೆ-ಜಾಣಿಗೆ ಸುತ್ತಮುತ್ತ ನಿರಂತರವಾಗಿ ಮಳೆ ಸುರಿದಿದೆ‌. ಭಾರೀ ಗಾಳಿ-ಮಳೆಯಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲೂ ಕೂಡ ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಭಾಗದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.

ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನ ಬಯಲುಸೀಮೆ ಭಾಗ ಕಳಸಾಪುರ ಹಾಗೂ ಬೆಳವಾಡಿ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಮಳೆ ಇಲ್ಲದೆ ಅಡಿಕೆ-ತೆಂಗು ಸೇರಿದಂತೆ ಆಹಾರ ಬೆಳೆಗಳು ಕೂಡ ಒಣಗಿ ನಿಂತಿದ್ದವು. ಕಳೆದೊಂದು ವಾರದಿಂದ ಮಲೆನಾಡು ಹಾಗೂ ಬಯಲು ಸೀಮೆ ಭಾಗದಲ್ಲಿ ಆಗಾಗ್ಗೆ ನಿರಂತರ ಮಳೆಯಾಗುತ್ತಿರುವುದರಿಂದ ರೈತ ಸಮುದಾಯದಲ್ಲಿ ಸಂತಸ ಮನೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!