ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮತ್ತು ಇಂದು ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಷಾಢ ಮಾಸದ ರೀತಿಯಲ್ಲಿ ಮಳೆ ಸುರಿಯುತ್ತಿದೆ.