ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜ್ಯದ ಮುಂಬೈ ಮತ್ತು ನೆರೆಯ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂಬೈ ಮಹಾನಗರ ಪಾಲಿಕೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ವಿಮಾನ ನಿಲ್ದಾಣದ ವಕ್ತಾರರು, ಒಂಬತ್ತು ವಿಮಾನಗಳು ನಿಲ್ದಾಣಕ್ಕೆ ಇಳಿಯುವ ಮೊದಲು ಹಲವು ಬಾರಿ ಸುತ್ತು ಹಾಕಿದ್ದವು. ಒಂದು ವಿಮಾನವನ್ನು ಭಾರೀ ಮಳೆಯಿಂದಾಗಿ ಮಧ್ಯಾಹ್ನ 12 ಗಂಟೆಯವರೆಗೆ ಸೂರತ್‌ಗೆ ತಿರುಗಿಸಲಾಯಿತು.
ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಿವಾಸಿಗಳು ಅಗತ್ಯವಿದ್ದರೆ ಮಾತ್ರ ಜನರು ಮನೆಯಿಂದ ಹೊರಹೋಗುವಂತೆ ಮನವಿ ಮಾಡಿದೆ. ಮೀನುಗಾರರು ಅರೇಬಿಯನ್ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸತತ ಮೂರನೇ ದಿನದಿಂದ ಭಾರೀ ಮಳೆಯ ಕಾರಣದಿಂದ ಹಲವಾರು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡವು.