ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವ ದಕ್ಷಿಣ ಕನ್ನಡ ಜಿಲ್ಲೆಯ ಮೇಲೂ ಬೀರಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆಯಿಂದ ವರುಣನ ಆರ್ಭಟ ಜೋರಾಗಿದೆ.
ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜು ವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.