ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 2ರ ಶುಕ್ರವಾರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.