ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ರೆಡ್​ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ವರುಣನ ಆರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆ ಗುಡ್ಡ ಕುಸಿದಿದೆ.

ಉಳ್ಳಾಲ, ಕಲ್ಲಾಪು, ಬಿಗಂಬಿಲ, ಪಿಲಾರ್, ತಲಪಾಡಿ, ಅಂಬಿಕಾರಸ್ತೆ, ಕೋಟೆಕಾರು, ಪಾವೂರು, ಹರೇಕಳದ ಜನರು ಹೈರಾಣಾಗಿದ್ದಾರೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್​ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ ಮಾಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!