ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.1ರಂದು ಶುಕ್ರವಾರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಶುಕ್ರವಾರವೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿ ಗಮನದಲ್ಲಿರಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!