ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ (Himachal Pradesh) ಭಾರೀ ಮಳೆ ಹಾನಿ ಮುಂದುವರಿದಿದ್ದು, ಹಠಾತ್ ಪ್ರವಾಹಕ್ಕೆ (flash floods) ಸಿಲುಕಿ ಏಳು ಜನರು ಸಾವಿಗೀಡಾಗಿದ್ದಾರೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಹೇಳಿದ್ದಾರೆ.
ಮಂಡಿ ಜಿಲ್ಲೆಯ ಸಂಬಾಲ್ ಗ್ರಾಮದಿಂದ ವಿಡಿಯೊವೊಂದನ್ನು ಹಂಚಿಕೊಂಡ ಅವರು, ಈ ಭಯಾನಕ ಪರಿಸ್ಥಿತಿಯನ್ನು ಪರಿಹರಿಸಲು ಸಕ್ರಿಯ ರಕ್ಷಣಾ, ಹುಡುಕಾಟ ಮತ್ತು ಪರಿಹಾರ ಕಾರ್ಯಾಚರಣೆಗಳು ಪ್ರಸ್ತುತ ಪ್ರಗತಿಯಲ್ಲಿವೆ ಎಂದು ಹೇಳಿದರು. ಗುಡ್ಡಗಾಡು ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ 33 ಜನರು ಸಾವನ್ನಪ್ಪಿದ್ದಾರೆ.
ಸಂಭಾಲ್, ಪಾಂಡೋಹ್ ಜಿಲ್ಲೆಯ ಮಂಡಿಯಲ್ಲಿ ದುರಂತ ಸಂಭವಿಸಿದ್ದು ಸೋಮವಾರ ಏಳು ವ್ಯಕ್ತಿಗಳು ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದಾರೆ.ಈ ಭೀಕರ ಪರಿಸ್ಥಿತಿಯನ್ನು ಪರಿಹರಿಸಲು ಸಕ್ರಿಯ ರಕ್ಷಣಾ, ಹುಡುಕಾಟ ಮತ್ತು ಪರಿಹಾರ ಕಾರ್ಯಾಚರಣೆಗಳು ಪ್ರಸ್ತುತ ಪ್ರಗತಿಯಲ್ಲಿವೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ16 ಮಂದಿ ಸಾವಿಗೀಡಾಗಿದ್ದರು. ಕಳೆದ ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ನಂತರ ಏಳು ಜನರು ಸಾವಿಗೀಡಾಗಿದ್ದು, ಶಿಮ್ಲಾ ನಗರದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದಲ್ಲಿ ಭೂಕುಸಿತದಲ್ಲಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಮಳೆ ಪೀಡಿತ ಹಿಮಾಚಲ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಪ್ರವಾಹದಿಂದಾಗಿ ಜೀವಹಾನಿ “ಅತ್ಯಂತ ದುಃಖಕರ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಜನರು ಮನೆಯೊಳಗೆ ಇರುವಂತೆ ಮತ್ತು ಚರಂಡಿ ಅಥವಾ ನದಿಗಳ ಬಳಿ ಹೋಗುವುದು ಬೇಡ ಎಂದು ಹೇಳಿದ್ದಾರೆ. ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರ ಹೋಗುವಂತೆ ಜನರಲ್ಲಿ ಹೇಳಿದ್ದು, ಈ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡದಂತೆ ಪ್ರವಾಸಿಗರಲ್ಲಿ ವಿನಂತಿಸಿದ್ದಾರೆ.