ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಮಳೆ: ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ 10 ಮತ್ತು 11 ರಂದು ರಾಜ್ಯದ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಜುಲೈ 10 ಸೋಮವಾರದಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕುಲು ಅಶುತೋಷ್ ಗರ್ಗ್ ಅವರು ಇಂದು ಬೆಳಿಗ್ಗೆ ತಿಳಿಸಿದ್ದಾರೆ. ಕಳೆದ ಶನಿವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದಾಗಿ ಬಹುತೇಕ ಸಂಪರ್ಕ ರಸ್ತೆಗಳು ಬಂದ್ ಆಗಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಕೂಡ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!