ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಡೆ ಭೂಕೂಸಿತ ಉಂಟಾಗಿದೆ. ಭೂಕುಸಿತದಿಂದಾಗಿ ಧರ್ಮಶಾಲಾ-ಚಟಾರೊ-ಗಗ್ಗಲ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಸದ್ಯ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಸುಂದರನಗರ, ಶಿಮ್ಲಾ ಮತ್ತು ಕಾಂಗ್ರಾದಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಮುಂದಿನ 2-3 ದಿನಗಳಲ್ಲಿ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ನಿಂದಾಗಿ ಮಳೆ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.