ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ, ಹೆದ್ದಾರಿಯಲ್ಲಿ 700ಕ್ಕೂ ಹೆಚ್ಚು ವಾಹನಗಳು ಸ್ಟ್ರಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ ಇನ್ನೂ ಮುಂದುವರಿದಿದ್ದು, ಪಾಂಡೋಹ್ ಬಳಿ ಕುಲು-ಮಂಡಿ ಹೆದ್ದಾರಿಯಲ್ಲಿ 700ಕ್ಕೂ ಹೆಚ್ಚು ವಾಹನಗಳು ಸಿಲುಕಿಕೊಂಡಿವೆ.

ಕುಲು-ಮಂಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಟ ನಿರ್ಬಂಧಿಸಲಾಗಿದ್ದು, ೭೦೦ಕ್ಕೂ ಹೆಚ್ಚು ವಾಹನಗಳು ಸಿಕ್ಕಿಹಾಕಿಕೊಂಡಿದ್ದು, ವಯಸ್ಸಾದವರು, ಮಕ್ಕಳು ಇರುವವರು ಕಷ್ಟ ಅನುಭವಿಸುತ್ತಿದ್ದಾರೆ.

ಹಾನಿಗೊಳಗಾದ ರಸ್ತೆಗಳನ್ನು ಬಳಸಲಾಗದೆ ತಾತ್ಕಾಲಿಕ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ. ಹೆದ್ದಾರಿಯನ್ನು ದುರಸ್ತಿ ಮಾಡಲು ಪ್ರತಿದಿನ ಮೂರು ಗಂಟೆ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 2ರವರೆಗೆ ಈ ರಸ್ತೆಯನ್ನು ಬಳಸಬೇಡಿ ಎಂದು ಮಂಡಿ ಡಿಸಿ ಅರಿಂದಮ್ ಚೌಧರಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!