ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಡ್ಯಾಂನಲ್ಲಿ ಸಿಲುಕಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ.
ಗಂಟೆಗಳ ಕಾಲ ಸತತ ಪ್ರಯತ್ನ ನಡೆಸಿ ಜನರನ್ನು ಕಾಪಾಡಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಾಗಿದೆ. ನೀರು ಹೆಚ್ಚಿರುವ ಕಾರಣ 10 ಮಂದಿಯಿದ್ದ ಬೋಟ್ ಮಂಡಿಯ ಕೋಲ್ ಅಣೆಕಟ್ಟು ಜಲಾಶಯದಲ್ಲಿ ಸಿಲುಕಿ ಹಾಕಿಕೊಂಡಿತ್ತು.
ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಸತತವಾಗಿ ಪ್ರಯತ್ನಿಸಿ, ಗಂಟೆಗಳ ನಂತರ 10 ಮಂದಿಯನ್ನು ರಕ್ಷಿಸಲಾಗಿದೆ.
ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದೋಣಿಯಲ್ಲಿ ಸಿಲುಕಿದ್ದ10 ಜನರಲ್ಲಿ ಐವರು ಅರಣ್ಯ ಅಧಿಕಾರಿಗಳು ಇದ್ದರು ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಈವರೆಗೂ 338ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇನ್ನೂ ಎರಡು ದಇನ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.