ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಒಂದು ಗಂಟೆಗಳ ಕಾಲ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಹುಬ್ಬಳ್ಳಿಯ ನವನಗರ, ವಿದ್ಯಾನಗರ, ದೇಶಪಾಂಡೆ ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಕೇಶ್ವಾಪುರದ ಕೆಲವು ಕಡೆ ಸಣ್ಣ ಪ್ರಮಾಣದ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆ ಹಿನ್ನೆಲೆ ಹುಬ್ಬಳ್ಳಿ ನಗರದ ವಿದ್ಯುತ್ ಕಡಿತಗೊಂಡಿದೆ.
ಸತತ ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಚರಂಡಿ ತುಂಬಿ ಕೊಳಚೆ ನೀರು ಮುಖ್ಯ ರಸ್ತೆಗೆ ಹರಿದಿದೆ. ಅಲ್ಲದೇ ಪ್ರಮುಖ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇನ್ನು ಭಾರೀ ಮಳೆಯಿಂದಾಗಿ ಸಿಡಿಲು ಬಡಿದು ಮೇಕೆ ಮೇಯಿಸಲು ಹೋಗಿದ್ದ ವೃದ್ಧಯೊಬ್ಬರು ಸಾವನ್ನಪ್ಪಿದ್ದಾರೆ.