Monday, October 13, 2025

ಇಂದೋರ್‌ನಲ್ಲಿ ಭಾರೀ ಮಳೆ: ಕಟ್ಟಡ ಕುಸಿದು ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಇಂದೋರ್‌ನ ರಾಣಿಪುರ ಪ್ರದೇಶದಲ್ಲಿ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ವಿವರಗಳನ್ನು ನೀಡಿದ ಜಿಲ್ಲಾಧಿಕಾರಿ ಶಿವಂ ವರ್ಮಾ, ಕಟ್ಟಡದ ಅವಶೇಷಗಳ ಅಡಿಯಲ್ಲಿ ಒಂದೇ ಕುಟುಂಬದ 14 ಸದಸ್ಯರು ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ. ಗಾಯಗೊಂಡ 12 ಮಂದಿ ಮಹಾರಾಜ ಯಶ್ವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ (ಎಂವೈಎಚ್) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ, ಮೃತರನ್ನು ಅಲಿಫಾ ಮತ್ತು ಫಹೀಮ್ ಎಂದು ಗುರುತಿಸಲಾಗಿದೆ.

ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅಲಿಫಾ ಅವರನ್ನು ಮಹಾರಾಜ ಯಶವಂತ್ ರಾವ್ ಆಸ್ಪತ್ರೆಗೆ ಕರೆತರಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಮಹಾತ್ಮ ಗಾಂಧಿ ಸ್ಮಾರಕ ವೈದ್ಯಕೀಯ ಕಾಲೇಜಿನ ಡೀನ್ ಡಾ. ಅರವಿಂದ್ ಘಂಘೋರಿಯಾ ತಿಳಿಸಿದ್ದಾರೆ.

ಐದು ಗಂಟೆಗಳ ರಕ್ಷಣಾ ಕಾರ್ಯಾಚರಣೆ ಮುಗಿದಿದೆ,ಕಟ್ಟಡದ ಮುಂಭಾಗವನ್ನು ಇತ್ತೀಚೆಗೆ ಪುನರ್ನಿರ್ಮಿಸಲಾಗಿತ್ತು, ಆದರೆ ಹಿಂಭಾಗವು ಹಳೆಯದಾಗಿತ್ತು. ಕಟ್ಟಡದ ಅಡಿಪಾಯದ ಸ್ಥಿತಿಯನ್ನು ನಾವು ಪರಿಶೀಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!