ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 48 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಭಾರಿ ಮಳೆಯಾಗಿದ್ದು,ಪೂಂಚ್‌ನಲ್ಲಿ ಹಾನಿಯುಂಟುಮಾಡಿದೆ.
ಭಾರೀ ಮಳೆಯಿಂದಾಗಿ ಪೂಂಚ್ ಮಂಡಿ ಜಿಲ್ಲೆಯಲ್ಲಿ ಭೂಕುಸಿತದಿಂದ ಹಲವಾರು ಮನೆಗಳಿಗೆ ಹಾನಿಯಾಗಿದೆ. ಭಾರೀ ಮಳೆಯಿಂದಾಗಿ ಪೂಂಚ್ ಮತ್ತು ಉತ್ತರ ಕಾಶ್ಮೀರದ ಭಾಗಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿದೆ. ಇದರಿಂದ 8ರಿಂದ 10 ಕಟ್ಟಡಗಳು, ರಸ್ತೆಗಳು ಹಾಳಾಗಿವೆ.
ಈ ಬಗ್ಗೆ ಸ್ಥಳೀಯ ನಿವಾಸಿ ಅಶ್ಫಾಕ್ ಹುಸೇನ್ ಪ್ರತಿಕ್ರಿಯಿಸಿ, ಭಾರಿ ಮಳೆಗೆ 8ರಿಂದ 10 ಮನೆಗಳಿಗೆ ಹಾನಿಯಾಗಿದೆ. ಕೆಲ ಮನೆಗಳು ಕೊಚ್ಚಿ ಹೋಗಿದ್ದು, ಇನ್ನು ಕೆಲ ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಜತೆಗೆ ರಸ್ತೆಗಳೂ ಹಾಳಾಗಿವೆ ಎಂದು ತಿಳಿಸಿದ್ದಾರೆ.