ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಹಿಪ್ಪರಗಾ ಗ್ರಾಮದ ಸೇತುವೆ ಮುಳುಗಡೆಯಾಗಿದ್ದು, ಕುದಮೂಡ ಹಾಗೂ ಕಲಕುಟಗಾ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಮಳೆಯಿಂದಾಗಿ ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಟ ನಡೆದಿದ್ದು,ಗ್ರಾಮೀಣ ಭಾಗದಲ್ಲಿ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಹಾರಾಷ್ಟ್ರದಿಂದ ಭೀಮೆಗೆ ನೀರು:
ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.ಭೀಮೆಗೆ ನೀರು ಬಿಡುಗಡೆ ಮಾಡಲಾಗಿದೆ.ತುಂಬಿ ಹರಿಯುತ್ತಿರುವ ಹಿನ್ನೆಲೆ, ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಾ ಸೇತುವೆ ಮುಳುಗಡೆ ಹಂತಕ್ಕೆ ಬಂದು ತಲುಪಿದೆ.
ಇನ್ನೂ ಮಹಾರಾಷ್ಟ್ರದಿಂದ ಅಪಾರ ಪ್ರಮಾಣದಲ್ಲಿ ಭೀಮೆಗೆ ನೀರು ಹರಿಬಿಟ್ಟ ಪರಿಣಾಮವಾಗಿ ಭೀಮಾ ನದಿಯ ತಟದ ಜನರಲ್ಲಿ ಪ್ರವಾಹದ ಆತಂಕ ಮನೆಮಾಡಿದೆ.