ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ

 ಹೊಸ ದಿಗಂತ ವರದಿ, ಕಲಬುರಗಿ:

ಕಲಬುರಗಿ ಸೋಮವಾರ ಮಧ್ಯಾಹ್ನದಿಂದ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಅಫಜಲಪುರ ಹಾಗೂ ಆಳಂದ ತಾಲೂಕಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ.

ಹವಾಮಾನ ಇಲಾಖೆಯ ವರದಿಯಂತೆ ಜಿಲ್ಲೆಯ ಅಫಜಲಪುರ ತಾಲೂಕಿನ ಅತನೂರ ಹೋಬಳಿ ಮಟ್ಟದಲ್ಲಿ ೬೪.೫ ಮೀ.ಮೀ,ಕೊಳ್ಳೂರು (ಡಿ) ೬೫ ಮೀ.ಮೀ ಹಾಗೂ ಅಫಜಲಪುರ ತಾಲೂಕಿನ ಗೌರ ಬಿ ಗ್ರಾಮದಲ್ಲಿ ೬೫.೫ ಮೀ.ಮೀಟರನಷ್ಟು ಮಳೆಯಾಗಿದೆ.ಇದನ್ನೂ ಹೊರತುಪಡಿಸಿ ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ೬೮.೫ ಮೀ.ಮೀಟರನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ಒಂದು ದಿನ ಕೊಂಚ ಬಿಡುವು ನೀಡಿದ ವರುಣರಾಯ, ಸೋಮವಾರ ಮತ್ತೆ ಅಬ್ಬರಿಸಿ ಬೊಬ್ಬೊರೆಯುತ್ತಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!