WEATHER | ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮ್ನಾಬಾದ್, ಚಿತ್ತಾಪುರ್, ಚಿಟಗುಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟವಾಳ, ಕುಂದಾಪುರ, ಜಿಕೆವಿಕೆಯಲ್ಲಿ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!