ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಸರಗೋಡು ಜಿಲ್ಲೆಯ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಶೈಕ್ಷಣಿಕ ಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆ ಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ರಾಜ್ಯ, ಸಿ ಬಿ ಎಸ್ ಇ, , ಐ ಸಿ ಎಸ್ ಸಿ ಶಾಲೆಗಳು.ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸಾ ಸಂಸ್ಥೆಗಳಿಗೆ ರಜೆ ಅನ್ವಯ ವಾಗಲಿದೆ.
ಕಾಲೇಜುಗಳಿಗೆ ಈ ರಜೆ ಅನ್ವಯವಾಗುವುದಿಲ್ಲ. ಪೂರ್ವಭಾವಿ ನಿರ್ಧಾರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.