ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇರಳದಲ್ಲಿ ಕಳೆದ ಎರಡು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಇದರ ಪರಿಣಾಮ 26 ಜನರ ಅಸುನೀಗಿದ್ದು, ಅನೇಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಎನ್ಡಿಆರ್ಎಫ್ ಮಾತ್ರವಲ್ಲದೇ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳವು ಕೂಡಾ ಸ್ಥಳೀಯರ ಸಹಕಾರದೊಂದಿಗೆ ರಕ್ಷಣೆ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಕೊಟ್ಟಯಂ ಜಿಲ್ಲೆಯ ಕೂಟ್ಟಿಕಲ್ ಹಾಗೂ ಇಡ್ಡುಕ್ಕಿ ಜಿಲ್ಲೆಯ ಕೊಕ್ಕಯಾರ್ನಲ್ಲಿ ಡಜನ್ಗಟ್ಟಲೇ ಜನರು ನಾಪತ್ತೆಯಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲು ಮೇಘಸ್ಫೋಟವು ಒಂದು ಕಾರಣ ಎಂದು ಹವಾಮಾನ ತಜ್ಞರು
ಈ ನಡುವೆ ಭಾರತೀಯ ಹವಾಮಾನ ಇಲಾಖೆ ಸೋಮವಾರ 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಕೇರಳ, ಕರ್ನಾಟಕ ಮತ್ತು ಕರಾವಳಿಯಲ್ಲಿ ಲಕ್ಷದ್ವೀಪದಲ್ಲಿ ಮೀನುಗಾರಿಕೆಯನ್ನು ಸೋಮವಾರದವರೆಗೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ದು, ಮಳೆ ಮತ್ತು ಭೂಕುಸಿತ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವವವರ ರಕ್ಷಣೆ ಕೆಲಸವನ್ನು ಮಾಡುತ್ತಿದ್ದು, ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.