Wednesday, June 29, 2022

Latest Posts

ಕೇರಳದಲ್ಲಿ ಭಾರೀ ಮಳೆ: ಇಬ್ಬರು ಮಕ್ಕಳು ಸಹಿತ ನಾಲ್ವರು ಸಾವು, ತಗ್ಗು ಪ್ರದೇಶಗಳಿಗೆ ನೀರು!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಗೆ ಮಲಪ್ಪುರಂನಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೇಂದ್ರ ಜಲ ಆಯೋಗವು ತಮಿಳುನಾಡು ಮತ್ತು ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಪ್ರವಾಹದ ಮೂನ್ಸೂಚನೆ ನೀಡಿದೆ.
ಮಳೆಯಿಂದ ಅಪಾರ ಪ್ರಮಾಣದ ಕೃಷಿ ಭೂಮಿ ಮತ್ತು ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದೆ. ಬಿಟ್ಟು ಬಿಡದೇ ಭಾರಿ ಮಳೆಯಾಗುತ್ತಿರುವ ಪರಿಣಾಮ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಅನೇಕ ಅಣೆಕಟ್ಟುಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ.
ಕೋಯಿಕ್ಕೋಡ್‌ನಲ್ಲಿ ಇರುವಂಜಿ ಮತ್ತು ಚಲಿಯಾರ್ ನದಿಗಳು ತುಂಬಿ ಹರಿಯುತ್ತಿವೆ. ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪ್ರಸಿದ್ಧ ಆಲುವಾ ಶಿವನ ದೇವಸ್ಥಾನ ಮುಳುಗಡೆಯಾಗಿದೆ. ಎರನಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿರುವುದರ ಬಗ್ಗೆ ವರದಿಯಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss