ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೆಲವು ಜಿಲ್ಲೆಗಳಿಗೆ ಶನಿವಾರ ರೆಡ್ ಅಲರ್ಟ್ ಘೋಷಿಸಿದೆ.
ಕೇರಳದ ಪಟ್ಟಣಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಹೀಗಾಗಿ ಮೇ 19, 20ರಂದು ಎರಡೂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದಿದೆ.
ಉಳಿದಂತೆ ತಿರುವನಂತಪುರ, ಕೊಲ್ಲಂ, ಅಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 19ರಿಂದ 22 ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.