ಕೇರಳದ ಭಾರೀ ಮಳೆ: 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳದ ಭಾರೀ ಮಳೆಯಾಗುತ್ತಿದ್ದು, ಇನ್ನಷ್ಟು ವರುಣಾರ್ಭಟ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳ ರೆಡ್ ಅಲರ್ಟ್ ಘೋಷಿಸಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಇದರಿಂದಾಗಿ 757 ಜನರನ್ನು 47 ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಮೂರು ಕಣ್ಣೂರು, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತದಲ್ಲಿವೆ. ತ್ರಿಶೂರ್ ನ ಚಾವಕ್ಕಾಡ್ ನಲ್ಲಿ ಇಬ್ಬರು ಮೀನುಗಾರರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನು ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುಡ್ಡಗಾಡು ಪ್ರದೇಶಗಳಿಗೆ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!