ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪದವಿಪೂರ್ವ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.