ದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯ ಎಲ್ಲೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ರಂಗಧಾಮಪ್ಪ ಅವರು ಮಂಗಳವಾರ ಬೆಳಗ್ಗೆ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೂ ಮಂಗಳವಾರ ರಜೆ ನೀಡಲಾಗಿದೆ ಎಂದು ಡಿಡಿಪಿಯು ಮಂಜುಳಾ ಅವರು ತಿಳಿಸಿದ್ದಾರೆ.