ಕೃಷ್ಣಾ ನದಿ ಪಾತ್ರದಲ್ಲಿ ಭಾರೀ ಮಳೆ: ನದಿ ಪಾತ್ರದ ಜನರಿಗೆ ಎಚ್ಚರದಿಂದಿರಲು ಆಡಳಿತ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.

ಇಂದು ಬೆಳಗ್ಗೆ 25 ಗೇಟ್‌ಗಳ ಮೂಲಕ 75 ಸಾವಿರದ 15 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗಿದೆ ಎಂದು ಅಣೆಕಟ್ಟೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!