ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಶ್ರೀ ಕ್ಷೇತ್ರ ಭೇಟಿ ಮುಂದೂಡಲು ಸಚಿವರ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :
ದ.ಕ ಜಿಲ್ಲೆಯ ಪುಣ್ಯ ಕ್ಷೇತ್ರವಾದ ಕುಕ್ಕೆ ಪರಿಸರದಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ , ಭಕ್ತಾದಿಗಳು ಮುಂದಿನ ಎರಡು ದಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಬಾರದು, ಮಳೆ ಕಡಿಮೆಯಾದ ಬಳಿಕ ಸಂದರ್ಶಿಸುವಂತೆ  ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್  ತಿಳಿಸಿದ್ದಾರೆ.
ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು, ಹರಿಹರ, ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಈ ಭಾಗದಲ್ಲಿ ಮುಂಜಾಗ್ರತಾ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ  ಕಳುಹಿಸಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ  ಗಮನಹರಿಸಬೇಕು ಎಂದು ಸಚಿವರು  ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!