spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ: ಕೊಂಕಣ ರೈಲ್ವೆ ಸಂಚಾರ ಅಸ್ತವ್ಯಸ್ತ, ವಿವಿಧ ರೈಲುಗಳಲ್ಲಿದ್ದಾರೆ 6 ಸಾವಿರಕ್ಕೂ ಅಧಿಕ ಪ್ರಯಾಣಿಕರು!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರತ್ನಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದ ರೈಲು ಸಂಚಾರ ಅಸ್ತವ್ಯಸ್ತಗೊಂಡು ಸುಮಾರು 6,000 ಪ್ರಯಾಣಿಕರು ವಿವಿಧ ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ.
ನದಿ ಉಕ್ಕಿ ಹರಿಯುವ ಪರಿಣಾಮ ಹಳಿಗಳು ಜಲಾವೃತಗೊಂಡಿವೆ. ಇದುವರೆಗೆ 9 ರೈಲುಗಳ ಸೇವೆಯನ್ನು ನಿಯಂತ್ರಿಸಲಾಗಿದೆ. ಅಂದರೆ, ಕೆಲ ರೈಲುಗಳ ಸಂಚಾರವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಮತ್ತೆ ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.
ಇನ್ನು ಈ ರೈಲುಗಳು ವಿವಿಧ ನಿಲ್ದಾಣಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿವೆ. ಅವುಗಳಲ್ಲಿದ್ದ ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಅವರಿಗೆ ಆಹಾರ ಮತ್ತು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆಯ ಪರಿಣಾಮ ರತ್ನಗಿರಿಯ ಚಿಪ್ಲುನ್ ಮತ್ತು ಕಾಮಥೆ ನಿಲ್ದಾಣಗಳ ನಡುವಿನ ವಶಿಷ್ಠ ನದಿ ಸೇತುವೆಯಲ್ಲಿ ನೀರಿನ ಮಟ್ಟವು ಅಪಾಯದ ಮಟ್ಟ ಮೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ಈ ವಿಭಾಗದಲ್ಲಿ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಕೊಂಕಣ ರೈಲ್ವೆ ಮಾರ್ಗದ ವಿವಿಧ ನಿಲ್ದಾಣಗಳಲ್ಲಿ 5,500-6,000 ಪ್ರಯಾಣಿಕರು ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss