ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಪ್ರಧಾನಿ ಮೋದಿ ಭೇಟಿ ರದ್ದುಗೊಂಡಿದೆ.
ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಿತ್ತು. ಭಾರಿ ಮಳೆ ಹಿನ್ನೆಯಲ್ಲಿ ಮುಂಬೈಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಗುರುವಾರ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಲವು ರಸ್ತೆಗಳು ಮುಳುಗಿವೆ. ಇಷ್ಟೇ ಅಲ್ಲ, ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹಲವು ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.