ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿಗಳಿಗೆ ಅನಾಹುತಗಳು ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ವಹಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.
ಪ್ರವಾಹ ಪರಿಹಾರ ಕಾಮಗಾರಿಗಳಿಗೆ ಅತ್ಯಾಧುನಿಕ ಉಪಕರಣಗಳನ್ನು ಬಳಸಿ. ಇಂಥ ಉಪಕರಣಗಳ ಖರೀದಿಗೆ ಹಣ ಬಿಡುಗಡೆ ಮಾಡಲಾಗುವುದು. ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿರುವ ಹಣ ಬಳಸಿ ಪರಿಸ್ಥಿತಿ ನಿಭಾಯಿಸಿ. ನದಿ ಮತ್ತು ಭೂಕುಸಿತ ಉಂಟಾಗುವ ಪ್ರದೇಶ ಗುರುತಿಸಲು ವಿಶೇಷ ತಂಡ ರಚಿಸಿ. ಭೂಕುಸಿತ ಉಂಟಾಗಬಹುದಾದ ಪ್ರದೇಶದ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಬೆಳೆನಷ್ಟ ಸಮೀಕ್ಷೆ ನಡೆಸಿ ಪರಿಹಾರ ವಿತರಣೆಗೆ ತಕ್ಷಣ ಕ್ರಮಕೈಗೊಳ್ಳಿ ಎಂದು ಯಡಿಯೂರಪ್ಪ ಹೇಳಿದರು.
ಕೊಡಗು, ಬಳ್ಳಾರಿ, ಹಾಸನ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ , ಚಿಕ್ಕಮಗಳೂರು, ವಿಜಯಪುರ, ಕಲಬುರಗಿ, ಮೈಸೂರು, ಕೊಪ್ಪಳ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ 8 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದೆ. ಬೆಳೆ ನಷ್ಟ ಉಂಟಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಿದಲ್ಲಿ ಪರಿಹಾರ ವಿತರಣೆಗೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.