ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.
ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ತಗ್ಗು ಪ್ರದೇಶಗಳಿಗೆ ನೆರೆ ಭೀತಿ ಕಾಡುತ್ತಿದೆ.
ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸಂಭಾವ್ಯ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಭೂಕುಸಿತ, ಪ್ರವಾಹದಂತಹಾ ಅಪಾಯ ಕಾಡುವ ಸ್ಥಳಗಳ ಮೇಲೆ ನಿರಂತರ ನಿಗಾ ಇರಿಸಿದೆ.