ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳು ಇನ್ನಷ್ಟು ಬಿರುಸುಗೊಳ್ಳಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 28 ಮತ್ತು ಜುಲೈ 29 ರಂದು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಕ್ರಮವಾಗಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 28 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ,ವಿಜಯನಗರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ.