Saturday, October 18, 2025

ಮುಂಬೈನಲ್ಲಿ ಭಾರೀ ಮಳೆ: 350ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಮುಂಬೈನಲ್ಲಿ ಭಾರೀ ಮಳೆಯಾಗಿದ್ದರಿಂದ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆ ಉಂಟಾಗಿದ್ದು, 350ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ. ಜೊತೆಗೆ ಎರಡು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಯಿತು.

ಫ್ಲೈಟ್‌ರಾಡರ್‌’ನ ದತ್ತಾಂಶದ ಪ್ರಕಾರ ಮುಂಬೈ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 283 ವಿಮಾನಗಳು ವಿಳಂಬವಾಗಿದ್ದರೆ, 77 ಒಳಬರುವ ವಿಮಾನಗಳು ನಿಗದಿತ ಸಮಯಕ್ಕಿಂತ ತಡವಾಗಿದೆ.

ಶನಿವಾರ ಮುಂಜಾನೆಯಿಂದಲೇ ಮುಂಬೈನಲ್ಲಿ ನಗರದ ಕೆಲವು ಭಾಗಗಳಲ್ಲಿ 200 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ.

error: Content is protected !!